ಯೋಗಿ ಆದಿತ್ಯನಾಥ್ ಹುಬ್ಬಳ್ಳಿಯ ಮೂರುಸಾವಿರ ಮಠಕ್ಕೆ ಭೇಟಿ | Oneindia Kannada

  • 6 years ago
Uttar Pradesh Chief minister Yogi Adityanath to visit Moorusavir mutt, Hubballi on December 21 evening. Later he will address Nava Karnataka Parivarthana Yatra.


ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಪರಿವರ್ತನಾ ಯಾತ್ರೆ ಉದ್ಧೇಶಿಸಿ ಮಾತನಾಡಲಿದ್ದಾರೆ.ಸಂಜೆ 5.30ರ ವೇಳೆಗೆ ಅವರು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬಳಿಕ ಮೂರು ಸಾವಿರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಿಜೆಪಿ ನಾಯಕರ ಜೊತೆ ನೆಹರೂ ಮೈದಾನಕ್ಕೆ ತೆರಳಲಿದ್ದಾರೆ.ನೆಹರೂ ಮೈದಾನದಲ್ಲಿ ಆಯೋಜಿಸಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆ ಸಮಾವೇಶ ಉದ್ದೇಶಿಸಿ ಯೋಗಿ ಆದಿತ್ಯನಾಥ್ ಭಾಷಣ ಮಾಡಲಿದ್ದಾರೆ.ಮಹದಾಯಿ ನದಿ ನೀರಿನ ಹಂಚಿಕೆ ವಿವಾದದಲ್ಲಿ ಗೋವಾ ಸರ್ಕಾರದ ನಿಲುವನ್ನು ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಘೋಷಣೆ ಮಾಡಲಾಗುತ್ತದೆ. ಗೋವಾ ಮುಖ್ಯಮಂತ್ರಿ ಮಹೋಹರ್ ಪರಿಕ್ಕರ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಕಳಿಸಿದ್ದಾರೆ. ಸಮಾವೇಶದಲ್ಲಿ ಅದನ್ನು ಯಡಿಯೂರಪ್ಪ ಓದಲಿದ್ದಾರೆ. 'ಮಹದಾಯಿ ನದಿ ನೀರಿನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ವಿರೋಧ ವ್ಯಕ್ತಪಡಿಸಿದೆ ಎಂದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು' ಎಂದು ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

Recommended