ಮುಂಬರುವ ಚುನಾವಣೆಗೆ ಶಿವಮೊಗ್ಗದಲ್ಲಿ ಬಿ ಎಸ್ ಯಡಿಯೂರಪ್ಪನವರ ರಣತಂತ್ರ | Oneindia Kannada

  • 6 years ago
Karnataka BJP president B.S. Yeddyurappa to chalk out a plan to counter the Congress and JDS in his home town Shimoga district. In a 2013 elections BJP got only one seat out of 7 constituency. Will Yeddyurappa contest form Shikaripura, no clear picture till now.


ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಪರಿವರ್ತಯಾ ಯಾತ್ರೆ ಕೈಗೊಂಡಿದ್ದಾರೆ. ಯಾತ್ರೆಗೆ ಉತ್ತಮ ಬೆಂಬಲವಾಗುತ್ತಿದೆ, ಆದರೆ, ಅಭ್ಯರ್ಥಿಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಶಾಸಕರು ಇರುವುದು ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾತ್ರ. ರಾಜ್ಯದಲ್ಲಿ 150 ಸ್ಥಾನ ಗೆಲ್ಲಲು ಹೊರಟಿರುವ ಅವರಿಗೆ ತವರು ಕ್ಷೇತ್ರದಲ್ಲಿ ಮೊದಲು ಗೆಲುವು ಸಾಧಿಸುವುದು ಮುಖ್ಯವಾಗಿದೆ.ಸೊರಬ, ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳು ಜೆಡಿಎಸ್ ವಶದಲ್ಲಿವೆ. ತೀರ್ಥಹಳ್ಳಿ, ಸಾಗರ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳು ಕಾಂಗ್ರೆಸ್ ವಶದಲ್ಲಿವೆ. ಶಿಕಾರಿಪುರದಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಶಾಸಕರು.ಜಿಲ್ಲೆಯ 7 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂಬುದು ಯಡಿಯೂರಪ್ಪ ಅವರ ಗುರಿ. ಅದಕ್ಕಾಗಿ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಆದರೆ, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

Recommended