ಈ ವರ್ಷ ಹುಟ್ಟಿದ ಮೊದಲ ಹೆಣ್ಣು ಮಗುವಿಗೆ ಬಿಬಿಎಂಪಿಯಿಂದ ಭರ್ಜರಿ ಗಿಫ್ಟ್ | Oneindia Kannada

  • 6 years ago
ಹೆಣ್ಣು ಮಕ್ಕಳು ಹುಟ್ಟಿದರೆ ಕಷ್ಟ ಎಂದು ಯೋಚಿಸುವ ಈ ಕಾಲದಲ್ಲಿ ಬಿಬಿಎಂಪಿ ಅವರು ಹೆಣ್ಣು ಮಕ್ಕಳ ಜ್ಞಾನವನ್ನು ಪ್ರೋತ್ಸಾಹಿಸಿದೆ . ಹೊಸವರ್ಷದ ರಾತ್ರಿ 12 ಗಂಟೆಗೆ ಹುಟ್ಟಿದ ಹೆಣ್ಣು ಮಗುವಿಗೆ 5 ಲಕ್ಷ ರೂ. ನೀಡೋ ಮೂಲಕ ಬಿಬಿಎಂಪಿ ಭರ್ಜರಿ ಗಿಫ್ಟ್ ನೀಡಿದೆ. ವರ್ಷದ ಮೊದಲ ದಿನವೇ ಗೋಪಿ-ಪುಷ್ಪಾ ದಂಪತಿಗೆ ಹುಟ್ಟಿದ ಹೆಣ್ಣು ಮಗುವಿಗೆ ಬಿಬಿಎಂಪಿ ಈ ಭರ್ಜರಿ ಗಿಫ್ಟ್ ಘೋಷಿಸಿದ್ದಾರೆ. ರಾಜಾಜಿನಗರದ ಡಾ.ನಾಗರಾಜ್ ಸ್ಮಾರಕ ಆಸ್ಪತ್ರೆಯಲ್ಲಿ 12.05 ಕ್ಕೆ ಹೆಣ್ಣು ಮಗು ಜನಿಸಿದೆ. ಕೂಡಲೇ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ತೆರಳಿ ಬಹುಮಾನ ಘೋಷಿಸಿದ್ದಾರೆ. ಇದೇ ಮೊದಲ ಬಾರಿ ಈ ಬಗೆಯ ಬಹುಮಾನ ಘೋಷಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಹಾಗೂ ಮಗುವಿನ ಹೆಸರಿನಲ್ಲಿ ಐದು ಲಕ್ಷ ಹಣ ಠೇವಣಿ ಇಡಲು ನಿರ್ಧರಿಸಲಾಗಿದೆ. ಈ ಹಣವನ್ನು 18 ವರ್ಷದ ನಂತರ ಮಗುವಿನ ಉನ್ನತ ಶಿಕ್ಷಣಕ್ಕೆ ಬಳಕೆ ಮಾಡಬಹುದು.

Bengaluru's first baby girl of the year 2018 received gift of 5 lakh rupees from the BBMP.

Recommended