ಇನ್ಮುಂದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ | Filmibeat Kannada

  • 6 years ago
ಚಿತ್ರಮಂದಿರಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯವಲ್ಲ ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಸಿನಿಮಾ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಸುಪ್ರಿಂ ಕೋರ್ಟ್ ಈಗ ತನ್ನ ಆದೇಶವನ್ನು ಪರಿಷ್ಕರಣೆ ಮಾಡಿದೆ. ಸೋಮವಾರವಷ್ಟೇ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸುವಂತೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಸರಕಾರ ಮನವಿ ಮಾಡಿಕೊಂಡಿತ್ತು. ಈ ಅರ್ಜಿಯನ್ನ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ಬದಲಾವಣೆ ತಂದಿದೆ. ಈ ಹಿಂದೆ 2016ರ ನವೆಂಬರ್ 30ರಂದು ಚಿತ್ರ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು. ಈ ವೇಳೆ ಎಲ್ಲರೂ ಎದ್ದು ನಿಲ್ಲಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿತ್ತು. ನಂತರ ವಿಚಾರಣೆಯೊಂದರ ವೇಳೆ ದೇಶಪ್ರೇಮದ ಹೆಸರಿನಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ನೈತಿಕ ಪೊಲೀಸ್ ಗಿರಿ ಆಗುತ್ತದೆ. ಹಾಗಾಗಿ ತನ್ನ ಆದೇಶ ಮಾರ್ಪಾಡಿಗೆ ಸಿದ್ದವೆಂಬ ಸುಳಿವನ್ನು ಸುಪ್ರಿಂ ಕೋರ್ಟ್ ನೀಡಿತ್ತು.


Supreme court said on Monday that playing National Anthem at cinema halls is no longer compulsory and the new rule is brought into act from monday

Recommended