ಮಹಾ ಶಿವರಾತ್ರಿ ಹಬ್ಬದ ಮಹತ್ವ | Oneindia Kannada

  • 6 years ago
There are many stories related to Maha Shivaratri that people believe and celebrate. This depends mainly of the regions. Not only the story behind Maha Shivaratri, but also the way how people celebrate the festival will also differ depending on the regions.

ಹಿಂದೂ ಧರ್ಮದಲ್ಲಿ ಶಿವರಾತ್ರಿಗೆ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ. ಶುಚಿರ್ಭೂತರಾಗಿ ಶಿವನನ್ನು ಧ್ಯಾನಿಸುತ್ತಾ ದಿನಪೂರ್ತಿ ಭಕ್ತರು ಆಹಾರ ನೀರು ಮುಟ್ಟದೆ ಉಪವಾಸ ಕೈಗೊಳ್ಳುತ್ತಾರೆ. ಅಲ್ಲದೆ, ಉಪವಾಸವು ಹಗಲಿನಿಂದ ಪ್ರಾರಂಭಗೊಂಡು ರಾತ್ರಿ ಪೂರ್ತಿ ನಡೆದು ಮರುದಿನ ಪ್ರಾತಃ ಕಾಲಕ್ಕೆ ಕೊನೆಗೊಳ್ಳುತ್ತದೆ. ವ್ರತದ ಸಮಯದಲ್ಲಿ ಆಹಾರವಿಲ್ಲದೆ ಕಟ್ಟುನಿಟ್ಟಾಗಿ ದೇವರಲ್ಲಿ ಐಕ್ಯಗೊಳ್ಳಬೇಕು. ವ್ರತಾಧಾರಿಯು ಹಣ್ಣಿನ ರಸ, ಹಣ್ಣುಗಳು ಮತ್ತು ವಿಶೇಷ ವ್ರತ ಆಹಾರಗಳಾದ ವ್ರತದ ಅನ್ನ, ಬೀಜಗಳು, ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಪದಾರ್ಥಗಳನ್ನು ಸೇವಿಸಬಹುದು. ಸೂರ್ಯಾಸ್ತದ ನಂತರವಷ್ಟೇ ಊಟವನ್ನು ಸೇವಿಸಬೇಕು.

Recommended